September 20, 2024

ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿ; ಕ್ಯಾಂಪಸ್ ಫ್ರಂಟ್ ಮೊಂಬತ್ತಿ ಪ್ರತಿಭಟನೆ

0

ಬೆಳ್ತಂಗಡಿ: ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್‌ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.

ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಸಿಲುಕಿದ್ದಾರೆ,ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದರೂ ಇನ್ನೂ ಕೂಡ ಯುದ್ದಪೀಡಿತ ರಾಷ್ಟ್ರದಲ್ಲಿ ಜೀವಭಯದಿಂದ ಕಂಗಾಲಾಗಿದ್ದಾರೆ. ಆ ಪೈಕಿ ರಾಜ್ಯದ ನವೀನ್ ಎಂಬ ವಿದ್ಯಾರ್ಥಿ ರಷ್ಯಾದ ರಾಕೆಟ್ ದಾಳಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಪ್ರಜೆಗಳ ರಕ್ಷಿಸುವಲ್ಲಿ ವಿಫಲವಾಗಿದೆ.

ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕದನ ಪೀಡಿತ ರಾಷ್ಟ್ರಗಳಿಂದ ವಿದ್ಯಾರ್ಥಿಗಳು ಸಹಿತ ಎಲ್ಲರನ್ನೂ ರಕ್ಷಣೆ ಮಾಡಬೇಕು. ದೇಶದ ಜನರು ವಿದೇಶಗಳಲ್ಲಿ ಜೀವದ ಅಪಾಯವನ್ನೆದುರಿಸುವಾಗ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸದೆ ಬೇಜವಾಬ್ದಾರಿಯಿಂದ ವರ್ತಿಸುವ ಪರಿಣಾಮವೇ ಕರ್ನಾಟಕ ಇಂದು ಒಂದು ಅಮೂಲ್ಯ ಜೀವವನ್ನು ಕಳೆದುಕೊಂಡಿದೆ. ಮೃತಪಟ್ಟ ವಿದ್ಯಾರ್ಥಿಯ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ ನಾಸಿರ್ ಬಂಗೇರಕಟ್ಟೆ ,ಭಾಕಿರ್ ಪುಂಜಾಲಕಟ್ಟೆ ,ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!