March 22, 2026

ವಿಟ್ಲ: ರಸ್ತೆ ಉದ್ಘಾಟನೆ ವೇಳೆ ಪುತ್ತೂರು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಎರಡೂ ಬಣಗಳ ನಡುವೆ  ಮಾತಿನ ಚಕಮಕಿ‌ ನಡೆದು ಕೈ, ಕೈ, ಮಿಲಾಯಿಸಿದ ಕಾರ್ಯಕರ್ತರು

0
IMG-20220302-WA0047.jpg

ವಿಟ್ಲ: ರಸ್ತೆ ಕಾಮಗಾರಿ ನಡೆಯದಿರುವ ಬಗ್ಗೆ  ಆಕ್ರೋಶಗೊಂಡ ಸ್ವಪಕ್ಷದ ಕಾರ್ಯಕರ್ತರು ಸೇತುವೆ ಉದ್ಘಾಟನೆಗೆ ಆಗಮಿಸಿದ ಶಾಸಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ ಹಾಗೂ ಎರಡೂ ಬಣಗಳ ನಡುವೆ  ಮಾತಿನ ಚಕಮಕಿ‌ ನಡೆದು ಕೈ, ಕೈ, ಮಿಲಾಯಿಸಿದ ಘಟನೆ ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಮಜಲು ಸೇತುವೆ ಸಮೀಪ ಮ.೧ರಂದು ನಡೆದ ಬಗ್ಗೆ ವರದಿಯಾಗಿದ್ದು, ಇದೀಗ ಸ್ವ ಪಕ್ಷೀಯರ ಪರ ವಿರೋಧದ ಘರ್ಷಣೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಮಾ.1ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರುರವರು  ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆಗೆ ಬಂದಿದ್ದರು. ಈ ವೇಳೆ ಎಡಮಜಲು ಎಂಬಲ್ಲಿ ಸೇತುವೆ ನಿರ್ಮಾಣಗೊಂಡಿದ್ದು, ಅದರ ಉದ್ಘಾಟನೆ ನಿಗದಿಯಾಗಿತ್ತು. ಸೇತುವೆಯ ಮುಂದುವರೆದ ಭಾಗದ ರಸ್ತೆ ಕಾಂಕ್ರೀಟೀಕರಣಗೊಳ್ಳಬೇಕಿದ್ದು, ಈಗಾಗಲೇ 20 ಲಕ್ಷ ಅನುದಾನ ಮೀಸಲಾಗಿ, ಮಂಜೂರುಗೊಂಡಿತ್ತು.

ಈ ನಡುವೆ ಈ ರಸ್ತೆ ಸಾಗುವ ಮಧ್ಯೆ ಖಾಸಗಿ ವ್ಯಕ್ತಿಯೋರ್ವರ ಜಮೀನು ಇದ್ದು, ತನ್ನ ಜಾಗದ ಮೂಲಕ ರಸ್ತೆ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿಂದೆ ಈ ಜಾಗದ ಮಾಲಕರಾಗಿದ್ದವರು ಸ್ಥಳ ಕೊಡುವುದಾಗಿ ಒಪ್ಪಿದ್ದರು. ಈಗ ಜಾಗ ಖರೀದಿಸಿದವರು ರಸ್ತೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದ ಹಿನೆಲೆಯಲ್ಲಿ ರಸ್ತೆ ಕಾಮಗರಿ ನಡೆದಿಲ್ಲ ಎನ್ನಲಾಗಿದೆ. ಇದು ಬಣ ರಾಜಕೀಯಕ್ಕೆ ಕಾರಣವಾಗಿದ್ದು, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮತ್ತೊಂದು ಪಂಗಡದ ಬಿಜೆಪಿ ಕಾರ್ಯಕ್ರರ್ತರು ಎಡಮಜಲು ಸೇತುವೆ ಉದ್ಘಾಟನೆಗೆ ಬಂದಿದ್ದ ಶಾಸಕರನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೈವಸ್ಥಾನದವರೆಗೆ ರಸ್ತೆ ನಿರ್ಮಾಣ ಮಾಡಿದ ಬಳಿಕವೇ ಸೇತುವೆ ಉದ್ಗಾಟಿಸುವಂತೆ ಒತ್ತಾಯಸಿದರು. ಇದೇ ವೇಳೆ ಎರಡೂ ಬಣದ ಬಿಜೆಪಿ ಕಾರ್ಯಕರ್ತರ ನಡುವೆ ಶಾಸಕರ ಎದುರೇ ಮಾತಿಗೆ ಮಾತು ಬೆಳೆದು ಹೊÊಕೈ ಹಂತ ತಲುಪಿತು. ಮಧ್ಯಪ್ರವೇಶಿಸಿದ ಶಾಸಕರು ಎರಡೂ ಕಡೆಯವರನ್ನು ಸಮಾಧಾನಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಮುಖಂಡರಿಗೆ ಸೂಚನೆ ನೀಡಿದರು. ಬಳಿಕ ಸೇತುವೆ ಉದ್ಘಾಟನೆಗೊಂಡಿತು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!