March 22, 2026

ಉಕ್ರೇನ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಬಲಿ: ಪಂಜಾಬ್ ಮೂಲದ ವಿದ್ಯಾರ್ಥಿ ಮೃತ್ಯು

0
Screenshot_2022-03-02-10-58-09-64_680d03679600f7af0b4c700c6b270fe7.jpg

ನವದೆಹಲಿ: ಉಕ್ರೇನ್ ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಪಂಜಾಬ್​​ ಮೂಲದ ಚಂದನ್ ಜಿಂದಾಲ್ (22) ಮೃತ ಯುವಕ ಎಂದು ಗುರುತಿಸಲಾಗಿದೆ.

ಈತ ಉಕ್ರೇನ್ ನ ಲ್ಲಿರುವ ವಿನ್ನಿಟ್ಸಿಯಾ ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಕೋರ್ಸ್​ ಮಾಡುತ್ತಿದ್ದ.

ಪಂಜಾಬ್ನ ಬರ್ನಾಲಾದವರಾದ ಚಂದನ್ ಜಿಂದಾಲ್ಗೆ ಪಾರ್ಶವಾಯು ಉಂಟಾಗಿ ಅವರನ್ನು ವಿನ್ನಿಟ್ಸಿಯಾದ ಆಸ್ಪತ್ರೆಯ ತುರ್ತುಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೂ ಈಗಾಗಲೇ ವಿಷಯ ತಿಳಿಸಲಾಗಿದ್ದು, ಚಂದನ್ ಮೃತದೇಹವನ್ನು ವಾಪಸ್ ತರಲು ಸಹಾಯ ಮಾಡುವಂತೆ ಅವರ ತಂದೆ, ಕೇಂದ್ರ ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!