ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ಮಾ. 15ರವರೆಗೆ ವಿಸ್ತರಿಸಿದ ಶಿಕ್ಷಣ ಇಲಾಖೆ
ಬೆಂಗಳೂರು: ಖಾಸಗಿ ಶಾಲೆಗಳಲ್ಲಿರುವ ಶೇ. 25ರಷ್ಟು ಸೀಟು ಪಡೆಯುವ ಆರ್‌ಟಇ ಅರ್ಜಿ ಸಲ್ಲಿಕೆ ಅವಧಿಯನ್ನು ಮಾ. 15ರ ವರೆಗೆ ಶಿಕ್ಷಣ ಇಲಾಖೆಯು ವಿಸ್ತರಿಸಿದೆ.
ಆರ್‌ಟಇ ಅರ್ಜಿ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿತ್ತು. ಪೋಷಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಮಾ. 15ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಇನ್ನು ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಮಾ. 25ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಿದ್ದು, ಎ. 4ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.




