February 1, 2026

ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭದ್ರತಾ ಸಿಬ್ಬಂದಿ

0
image_editor_output_image1666428053-1646295604745.jpg

ಚೆನ್ನೈ : ಇಲ್ಲಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ರಾಜಸ್ಥಾನದ 26 ವರ್ಷದ ಯಶ್ ಪಾಲ್ ಟರ್ಮಿನಲ್‌ನಲ್ಲಿ ಟಾಯ್ಲೆಟ್ ಪ್ರದೇಶದಲ್ಲಿ ಎಸ್‌ಎಲ್‌ಆರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!