ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ದಾಳಿ: ಆಸ್ಪತ್ರೆಗೆ ದಾಖಲು
ಕೀವ್: ರಷ್ಯಾದ ದಾಳಿಯಿಂದ ನಲುಗಿರುವ ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಗೊಳಗಾಗಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ಹೇಳಿದ್ದಾರೆ.
ಕೀವ್ ನ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ತಕ್ಷಣ ಅವರನ್ನು ಕೈವ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ ತಿಳಿಸಿದ್ದಾರೆ.
ಯುದ್ಧ ಪೀಡಿತ ಉಕ್ರೇನ್ ನಿಂದ ಕೂಡಲೇ ಸ್ಥಳಾಂತರವಾಗುವಂತೆ ವಿದ್ಯಾರ್ಥಿಗಳಿಗೆ ಈಗಾಗಲೇ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದೆ ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು. ಯುದ್ಧದ ಸಂದರ್ಭದಲ್ಲಿ, ಗನ್ ಬುಲೆಟ್ ಯಾರ ಧರ್ಮ ಮತ್ತು ರಾಷ್ಟ್ರೀಯತೆಯನ್ನು ನೋಡುವುದಿಲ್ಲ ಎಂದು ವಿ.ಕೆ ಸಿಂಗ್ ಹೇಳಿದರು.




