March 22, 2026

ಶ್ರೀರಂಗಪಟ್ಟಣ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆ

0
image_editor_output_image1281216783-1646384078680.jpg

ಶ್ರೀರಂಗಪಟ್ಟಣ : ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣದ ಕಾರೇಕುರ ಗ್ರಾಮದ ಬಳಿ ನಡೆದಿದೆ.

ಕಾರೇಕುರ ಗ್ರಾಮದ ಸಾಗರ್(26) ಮೃತ ಯುವಕ ಎನ್ನಲಾಗಿದೆ. ಕಳೆದ ದಿನಗಳ ಹಿಂದೆ ನಡೆದ ಕೆಆರ್ ಎಸ್ ಘಟನೆ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ನಡೆದಿರುವುದು ಗ್ರಾಮದ ಜನರಲ್ಲಿ ಆತಂಕ ಹೆಚ್ಚಿಸಿದೆ.

ಗ್ರಾಮದ ಸಮೀಪದ ಜಮೀನಿನ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಯುವಕನ ರಕ್ತಸಿಕ್ತ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ‌. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!