March 22, 2026

ಮಂಗಳೂರಿನಲ್ಲಿ ಹಿಜಾಬ್ ಧರಿಸಿ ತರಗತಿ ತೆರಳಲು ನಿರಾಕರಣೆ: ಕಾರ್‌ಸ್ಟ್ರೀಟ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾತಿನ ಚಕಮಕಿ

0
IMG_20220304_165056.jpg

ಮಂಗಳೂರು: ಮಂಗಳೂರಿನಲ್ಲಿ ಹಿಜಾಬ್ ವಿವಾದ ವಿಕೋಪಕ್ಕೆ ಏರಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಆದರೆ ಅಲ್ಲಲ್ಲಿ ಈ ಸಂಘರ್ಷ ತಲೆದೋರುತ್ತಲೇ ಇದೆ.

ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ.

ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು. ಇಂದು ಪ್ರಾಂಶುಪಾಲರ ಅನುಮತಿ ಮೇರೆಗೆ ವಿದ್ಯಾರ್ಥಿನಿಯರು ಪಿನ್ ಹಾಕದೇ ಕೇವಲ ಶಾಲು ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು.

ಆದರೆ, ಕೆಲ ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಪರೀಕ್ಷಾ ತರಗತಿಯಿಂದ ಹೊರಹೋಗಲು ತಿಳಿಸಿದ್ದಾರೆ.
ಪರಿಣಾಮ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ ಉಂಟಾಗಿದೆ. ಕಾಲೇಜು ಗೇಟು ಮುಂಭಾಗದಲ್ಲೇ ಪರಸ್ಪರ ಜಗಳಕ್ಕಿಳಿದಿದ್ದಾರೆ.

ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು, ಪರಿಸ್ಥಿತಿ ತಿಳಿಯಾಗಿದೆ.

Leave a Reply

Your email address will not be published. Required fields are marked *

error: Content is protected !!