ಅಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಹೃದಯಾಘಾತದಿಂದ ನಿಧನ
ಅಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ, ಸ್ಪಿನ್ ಬೌಲಿಂಗ್ ದಿಗ್ಗಜ ಶೇನ್ ವಾರ್ನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಶೇರ್ ವಾರ್ನ್ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ನಮ್ಮಿಂದ ಇದನ್ನು ನಂಬಲಾಗುತ್ತಿಲ್ಲ. ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾದ, ಸೂಪರ್‌ಸ್ಟಾರ್ ವಾರ್ನ್ ಇನ್ನಿಲ್ಲ. ಬದುಕು ಬಹಳ ಸೂಕ್ಷ್ಮವಾದದ್ದು. ಆದರೆ, ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಅವರ ಕುಟುಂಬ, ಸ್ನೇಹಿತರು ಮತ್ತು ವಿಶ್ವದಾದ್ಯಂತ ಇರುವ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
ಆಸ್ಟ್ರೇಲಿಯಾ ಪರ 145 ಟೆಸ್ಟ್ ಹಾಗೂ 194 ಏಕದಿನ ಪಂದ್ಯಗಳಲ್ಲಿ ಆಡಿದ್ದ ವಾರ್ನ್, ಕ್ರಮವಾಗಿ 708 ಮತ್ತು 293 ವಿಕೆಟ್‌ಗಳನ್ನು ಕಬಳಿಸಿದ್ದರು.
ಐಪಿಎಲ್‌ನಲ್ಲಿ ಆಡುವ ರಾಜಸ್ಥಾನ ರಾಯಲ್ಸ್ ತಂಡವನ್ನು ಮೊದಲ ಆವೃತ್ತಿಯ ಟೂರ್ನಿಯಲ್ಲಿ ಮುನ್ನಡೆಸಿದ್ದ ವಾರ್ನ್, ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.




