February 1, 2026

ಮಂಗಳೂರು: ಕುಸಿದು ಬಿದ್ದು ಪೊಲೀಸ್ ಅಧಿಕಾರಿ ಮೃತ್ಯು

0
IMG-20220304-WA0009.jpg

ಮಂಗಳೂರು: ಪೊಲೀಸ್ ಅಧಿಕಾರಿಯೋರ್ವರು‌ ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತ ಪೊಲೀಸ್ ಅಧಿಕಾರಿಯನ್ನು ಬೆರಳಚ್ಚು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ನಾಗವ್ವ(37) ಎನ್ನಲಾಗಿದೆ.

ಬೆಳಗಾವಿಯ ರಾಮದುರ್ಗಾ ಹೊಸೂರು ನಿವಾಸಿಯಾಗಿದ್ದ ತಿಪ್ಪಣ್ಣ ಅವರು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಸಂಜೆ ವೇಳೆಗೆ ಪಾಂಡೇಶ್ವರದಲ್ಲಿರುವ ಜಿಲ್ಲಾ ಎಸ್. ಪಿ. ಕಚೇರಿಯಲ್ಲಿರುವ ಬೆರಳು ಮುದ್ರೆ ಘಟಕದ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಎ.ಬಿ. ಶೆಟ್ಟಿ ಸರ್ಕಲ್ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!