March 22, 2026

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಗೆ ಹೋಗುತ್ತಿದ್ದ ವೇಳೆ ಕುಸಿದುಬಿದ್ದು ಎಎಸ್ಸೈ ಮೃತ್ಯು

0
image_editor_output_image1145313771-1646462749055.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎಎಸ್ಐ ಒಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರದಂದು ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬೆರಳುಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಪ್ಪಣ ನಾಗವ್ವ ಮಾದರ (37) ಮೃತಪಟ್ಟವರು.

ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ಇವರು 2011ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಇಲಾಖೆಗೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಆರು ತಿಂಗಳ ಹಿಂದೆ ಮುಂಬಡ್ತಿಗೊಂಡು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!