ತನ್ನ ತಂಗಿಯನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ
ಕಲಬುರಗಿ: ತನ್ನ ತಂಗಿಯನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಯುವತಿಯ ಯುವಕನೊಬ್ಬ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ.
ನಗರದ ಓಂನಗರದಲ್ಲಿನ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಆಕಾಶ್ (22) ಮೃತಪಟ್ಟ ಯುವಕ. ಈತ ತನ್ನ ಸ್ನೇಹಿತ ಶ್ರೀನಿಧಿಯ ಸಹೋದರಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಹಲವು ಬಾರಿ ಆಕಾಶ್ ಮತ್ತು ಶ್ರೀನಿಧಿ ನಡುವೆ ಗಲಾಟೆ ಕೂಡ ಆಗಿತ್ತು.
ಕೆಲ ದಿನಗಳ ಹಿಂದೆ ಶ್ರೀನಿಧಿ ಅವರ ಸಹೋದರಿ ಆಕಾಶ್ ಅವರೊಂದಿಗೆ ಮನೆ ಬಿಟ್ಟು ಹೋಗಿದ್ದರು. ಈ ಘಟನೆಯ ನಂತರ ಆಕ್ರೋಶಗೊಂಡಿದ್ದ ಶ್ರೀನಿಧಿ, ಆಕಾಶ್ ಹತ್ಯೆಗೆ ಸಂಚು ರೂಪಿಸಿದ್ದ. ನಿನ್ನೆ ರಾತ್ರಿ ಆಕಾಶ್ ನನ್ನು ಕರೆದುಕೊಂಡು ಹೋಗಿ, ಚಾಕುವಿನಿಂದ ಇರಿದು ಹತ್ಯೆ ಮಾಡಲಿದ್ದಾನೆ ಎನ್ನಲಾಗುತ್ತಿದೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





