March 22, 2026

ಪ್ರಯಾಣಿಕರಿದ್ದ ಕ್ಯಾಬ್ ಕಮರಿಗೆ: ಐವರು ಮೃತ್ಯು, ಓರ್ವ ಗಾಯ

0
Screenshot_2022-03-05-13-45-39-63_680d03679600f7af0b4c700c6b270fe7.jpg

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಮನ್ಸಾರ್ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಪ್ರಯಾಣಿಕರಿದ್ದ ಕ್ಯಾಬ್ ಕಮರಿಗೆ ಉರುಳಿದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.

ಕಾಶ್ಮೀರಕ್ಕೆ ಹೋಗುವ ಕ್ಯಾಬ್ ಮುಂಜಾನೆ ಮನ್ಸಾರ್ ನಿಂದ ಹೊರಟ ಕೆಲವೇ ಕಿಲೋಮೀಟರ್ ದೂರದಲ್ಲಿ ಅಪಘಾತಕ್ಕೀಡಾಯಿತು ಮತ್ತು ಆಳವಾದ ಕಮರಿಗೆ ಬಿದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಧಾವಿಸಿ ಗಾಯಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಮೃತದೇಹಗಳನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!