May 17, 2026

ಬಂಟ್ವಾಳ: ಮಹಿಳೆ ನಾಪತ್ತೆ- ಕೊಣಾಜೆ ಠಾಣೆಯಲ್ಲಿ ದೂರು ದಾಖಲು

0
IMG_20220306_111958.jpg

ಬಂಟ್ವಾಳ: ಜಿಲ್ಲೆಯ ಬಂಟ್ವಾಳ ತಾಲೂಕಿನ, ಕುರ್ನಾಡು ಗ್ರಾಮದ, ಮುಡಿಪುವಿನಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾಗಿರುವ ಮಹಿಳೆ ಮಹಾದೇವಿ (39 ವರ್ಷ) 2021ರ ಸೆಪ್ಟಂಬರ್ 9ರಿಂದ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದ್ದು.

5.1 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ, ಸದೃಢ ಶರೀರ, ಗುಲಾಬಿ ಬಣ್ಣದ ಸೀರೆ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಈ ಮಹಿಳೆ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರು: 0824-2220801, ಸಹಾಯಕ ಪೊಲೀಸ್ ಆಯುಕ್ತರು: 0824-2220536, ಕೊಣಾಜೆ ಠಾಣಾ ನಂಬರ್: 9480802350 ಈ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡಬಹುದೆಂದು ಅಥವಾ ಠಾಣೆಯನ್ನು ಸಂಪರ್ಕಿಸುವಂತೆ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!