December 16, 2025

ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಕಲುಷಿತ ನೀರು: 
ನೀರಿನ ಗುಣಮಟ್ಟ ಪರೀಕ್ಷೆಯನ್ನು ಭಾರತೀಯ ವಿಜ್ಞಾನ ಸಂಸ್ಥೆಗೆ ವಹಿಸಿದ ಹೈಕೋರ್ಟ್

0
Screenshot_2021-10-28-13-22-41-04_680d03679600f7af0b4c700c6b270fe7.jpg

ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಬಿಡುಗಡೆಯಾದ ಕಲುಷಿತ ನೀರು ಸೇರಿದ ಪರಿಣಾಮ ವಿಷಪೂರಿತವಾಗಿದೆ ಎಂದು ಹೇಳಲಾಗಿರುವ ಫಲ್ಗುಣಿ ನದಿ ಹಾಗೂ ಮರವೂರು ಜಲಾಶಯದ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಗೆ ಹೈಕೋರ್ಟ್ ವಹಿಸಿದೆ.

ಈ ವಿಚಾರವಾಗಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಈ ಆದೇಶ ನೀಡಿದೆ.

Leave a Reply

Your email address will not be published. Required fields are marked *

error: Content is protected !!