March 22, 2026

ಸುಳ್ಯ: ಮರದಿಂದ ಬಿದ್ದು ವ್ಯಕ್ತಿ‌ ಮೃತ್ಯು

0
IMG_20220306_204205.jpg

ಸುಳ್ಯ: ಮುಪ್ಪೇರಿಯ ಗ್ರಾಮದ ಪಾಜಪಳ್ಳ ಎಂಬಲ್ಲಿ‌ ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಾ.6 ರಂದು ನಡೆದಿದೆ.

ಕಾಪುತಡ್ಕ ಮಾಧವ (32) ಎಂಬವರು ಪಾಜಪಳ್ಳ ರಾಜೇಂದ್ರಪ್ರಸಾದ್ ಎಂಬವರ ತೋಟಕ್ಕೆ ಕೂಲಿ ಕೆಲಸಕ್ಕೆ ಹೋದವರು ಅಲ್ಲಿ ತೋಟದಲ್ಲಿ ಮರದ ಗೆಲ್ಲನ್ನು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಜಾರಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.
ತೀವ್ರ ಗಾಯಗೊಂಡ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ವೈದ್ಯರು ಪರೀಕ್ಷಿಸಿ ಮಾಧವರು ಮೃತಪಟ್ಟಿರುವುದಾಗಿ ತಿಳಿಸಿದರೆನ್ನಲಾಗಿದೆ.

ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಮಾಧವರ ಪತ್ನಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!