ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣನ ಬಂಧನ
ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐಯು ಭಾನುವಾರ ತಡರಾತ್ರಿ ದೆಹಲಿಯಲ್ಲಿ ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಸಿಬಿಐ ಪ್ರಧಾನ ಕಚೇರಿಯಲ್ಲಿ ಲಾಕಪ್ ನಲ್ಲಿಅವರನ್ನು ಇರಿಸಲಾಗಿದ್ದು, ಸಿಬಿಐ ಸತತ ಮೂರು ದಿನಗಳ ಕಾಲ ರಾಮಕೃಷ್ಣ ಅವರನ್ನು ವಿಚಾರಣೆ ಮಾಡಿದ್ದು ಅವರು ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.




