February 2, 2026

ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

0
Screenshot_2022-03-07-13-43-17-03_ae93b0d4e668ae3b9e42de29105ee7f0.jpg

ಹೊಸದಿಲ್ಲಿ: ಹಿಂದಿ ಚಿತ್ರರಂಗದ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಸಂಕಷ್ಟಕ್ಕೆ ಸಿಲುಕಿದ್ದು, ವಂಚನೆ ಪ್ರಕರಣದಲ್ಲಿ ನಟಿಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.

ದೆಹಲಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದರ ಆಯೋಜಕರಿಂದ 37 ಲಕ್ಷ ಹಣ ಪಡೆದಿದ್ದ ಸೋನಾಕ್ಷಿ ಸಿನ್ಹಾ ಅವರು, ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು ಎಂಬ ಆರೋಪ ಕೇಳಿಬಂದಿದೆ.

ನ್ಯೂಸ್ ಪೋರ್ಟಲ್ ವರದಿ ಪ್ರಕಾರ, ಮೊರಾದಾಬಾದ್‌ನ ಕತ್ಘಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಕಾರ್ಯಕ್ರಮ ಆಯೋಜಕ ಪ್ರಮೋದ್ ಶರ್ಮಾ, ಕಾರ್ಯಕ್ರಮವೊಂದನ್ನು ಆಯೋಜಿಸಿ ಸೋನಾಕ್ಷಿ ಸಿನ್ಹಾರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿದ್ದರು. ಆದರೆ ನಟಿ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.

ಜೊತೆಗೆ ತಾವು ಪಡೆದಿದ್ದ ಹಣವನ್ನು ವಾಪಸ್​ ನೀಡಿರಲಿಲ್ಲ. ಹಣ ವಾಪಸ್ ನೀಡುವಂತೆ ಹಲವು ಬಾರಿ ಸಂಪರ್ಕಿಸಿದರೂ ನಟಿಯಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ವಂಚನೆ ಪ್ರಕರಣ ದಾಖಲಿಸಲಾಗಿತ್ತು.

ಇದೀಗ, ಮೊರಾದಾಬಾದ್ ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಸೋನಾಕ್ಷಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಸದ್ಯ ನಟಿಗೆ ಬಂಧನ ಭೀತಿ ಎದುರಾಗಿದೆ.

Leave a Reply

Your email address will not be published. Required fields are marked *

error: Content is protected !!