ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮಂಗಳೂರಿನಲ್ಲಿ ಕೇಸ್ ದಾಖಲು
ಮಂಗಳೂರು: ಟಿವಿ ಪ್ಯಾನಲ್ ನಲ್ಲಿ ಕುಳಿತುಕೊಂಡು ಬಲಪಂಥೀಯ ಸಂಘಟನೆಯ ವಕ್ತಾರನಂತೆ ಮಾತನಾಡುತ್ತಿದ್ದ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ್ದ, ಇದೀಗ ಅರುಣ್ ಬಡಿಗೇರ್ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ನಾಡು ಗ್ರಾಮದ ಕೆ.ಎಸ್.ರಾವ್ ನಗರ ನಿವಾಸಿ ಬದ್ರುದ್ದೀನ್ ಅವರು ಅರುಣ್ ಬಡಿಗೇರ್ ವಿರುದ್ಧ ದೂರು ನೀಡಿದ್ದಾರೆ. ಅರುಣ್ ಬಡಿಗೇರ್ ಇತ್ತೀಚೆಗೆ ನಡೆದ ಸಂದರ್ಶನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರು ಮತ್ತು ಇಸ್ಲಾಮ್ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಇದರಿಂದ ನಮ್ಮ ಭಾವನೆಗೆ ಧಕ್ಕೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಬದ್ರುದ್ದೀನ್ ಆಗ್ರಹಿಸಿದ್ದಾರೆ.
ದೂರನ್ನು ಮುಲ್ಕಿ ಪೊಲೀಸರು ಸ್ವೀಕರಿಸಿದ್ದು, ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.




