February 2, 2026

ವಿಟ್ಲ: ಬಾಲಕ ಗಂಭೀರ- ಹಿಟ್ ಆ್ಯಂಡ್ ರನ್: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಅಪರಿಚಿತ ವಾಹನ ಡಿಕ್ಕಿ

0
IMG_20220307_173423.jpg

ವಿಟ್ಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡು, ಆತನ ತಂದೆ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸಂಭವಿಸಿದೆ.

ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಗಂಭೀರ ಗಾಯಗೊಂಡಿದ್ದು, ಆತನ ತಂದೆ ದಿನೇಶ್ ಅವರು ಗಾಯಗೊಂಡಿದ್ದಾರೆ.

ಬುಡೋಳಿಯ ವಿಸ್ಡ್ ಮ್ ಶಾಲೆಯ ಆರನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ ತಂದೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿ ಎಂಬಲ್ಲಿ ಲಾರಿಯನ್ನು ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

error: Content is protected !!