ವಿಟ್ಲ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬಾಲಕ ಮೃತ್ಯು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದ ಘಟನೆ
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ತಂದೆ ಮಗ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಮೃತಪಟ್ಟ ಬಾಲಕ. ಆತನ ತಂದೆ ದಿನೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಡೋಳಿಯ ವಿಸ್ಡ್ ಮ್ ಶಾಲೆಯ ಆರನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ ತಂದೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಗಂಭೀರ ಗಾಯಗೊಂಡ ಬಾಲಕನನ್ನು ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿ ಎಂಬಲ್ಲಿ ಲಾರಿಯನ್ನು ಸ್ಥಳೀಯರು ಪತ್ತೆ ಹಚ್ಚಿಸಲಾಗಿತ್ತು. ಆಸ್ಪತ್ರೆಯಲ್ಲಿದ್ದ ಬಾಲಕ ಮೃತಪಟ್ಟಿದ್ದಾನೆ.





