February 1, 2026

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿ ಕೈಚಳಕ ತೋರಿಸುತ್ತಿರುವ ಖದೀಮರು: ಮಹಿಳೆಯರ, ವಿದ್ಯಾರ್ಥಿನಿಯರ ಸಹಿತ ಹಲವರ ಚಿನ್ನಾಭರಣ, ಮೊಬೈಲ್ ಕಳವು

0
IMG_20220308_132908.jpg

ಉಪ್ಪಿನಂಗಡಿ: ಮಹಿಳೆಯೋರ್ವರ ಕತ್ತಿನಿಂದ ಐದೂವರೆ ಪವನ್ ತೂಕದ ಚಿನ್ನಾಭರಣವನ್ನು ಕದ್ದೋಯ್ದ, ಬಸ್ಸಿನಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿನಿಯರ ಸಹಿತ ಒಟ್ಟು ನಾಲ್ಕು ಮಂದಿಯ ಮೊಬೈಲ್ ಕಳವು ಮಾಡಿದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿ ನಡೆದಿದೆ.

ತಣ್ಣೀರುಪಂತ ಗ್ರಾಮದ ಅಳಕೆ ಮನೆ ನಿವಾಸಿ ಕೆ. ಖಾಲಿದ್ ಎಂಬವರ ಪತ್ನಿ ಝರಿನಾ ಎಂಬವರು ತನ್ನ ಇಬ್ಬರು ಮಕ್ಕಳೊಂದಿಗೆ ಕಲ್ಲೇರಿಯಿಂದ ಉಪ್ಪಿನಂಗಡಿಗೆ ಬಸ್‌ನಲ್ಲಿ ಬಂದು ಇಳಿಯುತ್ತಿದ್ದಂತೆ ಆಕೆಯ ಕತ್ತಿನಲ್ಲಿದ್ದ ಐದೂವರೆ ಪವನ್ ತೂಕದ ಚಿನ್ನದ ನೆಕ್ಲೆಸ್ ಕದ್ದೋಯ್ಯಲಾಗಿದೆ.

ಬಸ್ ನಿಲ್ದಾಣದಲ್ಲಿ ಇದ್ದ ಜನದಟ್ಟನೆಯ ದುರ್ಲಾಭ ಪಡೆದು ಕಳ್ಳರು ನೆಕ್ಲೆಸ್‌ನ್ನು ಲಪಟಾಯಿಸಿರುವ ಸಾಧ್ಯತೆ ವ್ಯಕ್ತವಾಗಿದ್ದು, ಈ ಬಗ್ಗೆ ಝರಿನಾ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕಾಲೇಜು ವಿದ್ಯಾರ್ಥಿನಿಯರ ಬೆಲೆ ಬಾಳುವ ಮೊಬೈಲ್‌ಗಳನ್ನು ಕಳ್ಳರು ಲಪಟಾಯಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ರಕ್ಷ, ಗೌರಿ, ವಂಶಿನಿ ಎಂಬ ಮೂವರು ವಿದ್ಯಾರ್ಥಿನಿಯರು ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ರಂಜಿತ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ತನ್ನ ಅಂಗಡಿಯಿಂದ ಒಂದು ಮೊಬೈಲ್ ಪೋನ್ ಕದ್ದೊಯ್ದಿರುವುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!