March 22, 2026

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ : ಶ್ರೀ ಆಖ್ತರ್ ಹುಸೈನ್ ನೇಮಕ

0
IMG-20220308-WA0035.jpg

ಮಂಗಳೂರು: ಕರ್ನಾಟಕ ವಿಧಾನಸಭಾ ವಿಪಕ್ಷ ಉಪನಾಯಕರು, ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಾದ ಸನ್ಮಾನ್ಯ ಶ್ರೀ ಯು.ಟಿ ಖಾದರ್ ಜೀ ರವರ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ರವರು ಪುದು ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ಆಖ್ತರ್ ಹುಸೈನ್ ಎಂ ಎಂ ರವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ, ಪಾಣಿಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು, ಹಿರಿಯ ಕಾಂಗ್ರೆಸ್ ಮುಖಂಡರಾದ ಇಬ್ರಾಹಿಂ ಕೋಡಿಜಾಲ್ ರವರು ನೇಮಕಾತಿ ಆದೇಶ ಪ್ರತಿ ನೀಡಿದರು.

ಅಲ್ಲದೇ ತಮಗೆ ವಹಿಸಲಾಗಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ರಾಜ್ಯ ಮತ್ತು ಜಿಲ್ಲಾ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ.

ಈ ಸಂದರ್ಭದಲ್ಲಿ ಪುದು ಗ್ರಾಮ.ಪಂ ಸದಸ್ಯರಾದ ಹಾಶೀರ್ ಪೇರಿಮಾರ್, ಫೈಝಾಲ್ ಅಮ್ಮೆಮಾರ್, ರಿಯಾಝ್ ಅಮ್ಮೆಮಾರ್, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಫಯಾಝ್ ಅಮ್ಮೆಮಾರ್, ಮಾಜಿ ಗ್ರಾ.ಪಂ ಸದಸ್ಯರಾದ ಅಬ್ದುಲ್ ಲತೀಫ್ ಹತ್ತನೇ ಮೈಲುಗಲ್ಲು, ಮೊ. ಜುಬೈರ್ ಅಮ್ಮೆಮಾರ್, ಪರ್ವಿಝ್ ಪಬ್ಬಿ ಅಮ್ಮೆಮಾರ್, ಝುಲ್ಫಿಖರ್ ಹುಸೈನ್ ಅಮ್ಮೆಮಾರ್ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!