March 22, 2026

ಮಂಗಳೂರು: ವೇಶ್ಯಾವಾಟಿಕೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ: ಒಟ್ಟು ಬಂಧಿತರ ಸಂಖ್ಯೆ 14ಕ್ಕೇರಿಕೆ

0
image_editor_output_image-199894475-1646759608651

ಮಂಗಳೂರು: ಕೆಲದಿನಗಳ ಹಿಂದೆ ನಗರದ ನಂದಿಗುಡ್ಡೆಯಲ್ಲಿ ನಡೆದ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೆ ಏರಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ನಗರ ಪೊಲೀಸ್‌ ಆಯುಕ್ತ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೊದಲ ಅಪ್ರಾಪ್ತೆ ನೀಡಿದ ಪ್ರಕರಣದಲ್ಲಿ 5 ಪ್ರತ್ಯೇಕ ಪೋಕ್ಸೋ ಪ್ರಕರಣಡಿ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದೀಗ ಮತ್ತೋರ್ವ ಅಪ್ರಾಪ್ತೆ ಸಂತ್ರಸ್ತೆ ನೀಡಿರುವ ದೂರಿಗೆ ಸಂಬಂಧಿಸಿ ಮತ್ತೆ 5 ಪ್ರಕರಣಗಳಡಿ ಮತ್ತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಇದರಲ್ಲಿ ಆರು ಮಂದಿ ಆರೋಪಿಗಳು ಮೊದಲಿನ ಪ್ರಕರಣದಲ್ಲಿ ಈಗಾಗಲೇ ಬಂಧಿಸಿರುವ ಆರೋಪಿಗಳಾಗಿದ್ದಾರೆ. ಇದೇ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ನಡೆಯುತ್ತಿದೆ ಎಂದರು.

Leave a Reply

Your email address will not be published. Required fields are marked *

error: Content is protected !!