ಯುವತಿಯ ವಿಚಾರವಾಗಿ ಕೊಲೆ: ಗುಂಡು ಹಾರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಂಗಳೂರು: ಯುವತಿಯ ವಿಚಾರವಾಗಿ ಇಬ್ಬರ ನಡುವೆ ನಿನ್ನೆ ಮಧ್ಯರಾತ್ರಿ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದ್ದು ಕೊಲೆಗಾರರನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಇಬ್ಬರಿಗೆ ಪುಲಕೇಶಿನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಪೊಲೀಸರ ಗುಂಡೇಟು ತಗುಲಿ ಗಾಯಗೊಂಡ ಕೊಲೆಗಾರರಾದ ಸೈಯದ್ ಮೋಯಿನ್ ಹಾಗೂ, ಅದ್ನಾನ್ ಖಾನ್ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.




