March 22, 2026

ಉತ್ತರ ಪ್ರದೇಶ ಚುನಾವಣಾ ಮತ ಎಣಿಕೆ: ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ

0
image_editor_output_image-1871902275-1646887203573.jpg

ಲಖನೌ: ಉತ್ತರ ಪ್ರದೇಶ ವಿಧಾನಸಭೆಯ 403 ಸ್ಥಾನಗಳಿಗೆ ಮತ ಎಣಿಕೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿಯು ಪ್ರಬಲ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ(ಎಸ್‌ಪಿ) ನೇತೃತ್ವದ ಮೈತ್ರಿಕೂಟಕ್ಕಿಂತ ಮುನ್ನಡೆ ಪಡೆದುಕೊಂಡಿದೆ.

ಉತ್ತರ ಪ್ರದೇಶ ವಿಧಾನಸಭೆಗೆ ‌ಫೆಬ್ರುವರಿ 10ರಿಂದ ಮಾರ್ಚ್‌ 7ರ ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಬಹುಮತ ಸಾಬೀತು ಮಾಡಲು ಬೇಕಿರುವ ಸಂಖ್ಯೆ 202 ಆಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ.

ಉತ್ತರ ಪ್ರದೇಶ ವಿಧಾನಸಭೆ ಫಲಿತಾಂಶವು 2024ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಹೀಗಾಗಿ ದೇಶದ ಚಿತ್ತ ಯುಪಿ ಫಲಿತಾಂಶದತ್ತ ನೆಟ್ಟಿದೆ.

ಬಹುತೇಕ ಚುನಾವಣಾ ಸಮೀಕ್ಷೆಗಳು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಭವಿಷ್ಯ ನುಡಿದಿವೆ. ಅದರಂತೆಯೇ, ಬಿಜೆಪಿ ಆರಂಭಿಕ ಮುನ್ನಡೆ ಪಡೆದುಕೊಂಡಿದೆ.

ಸದ್ಯ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಸ್‌ಪಿ ಅಭ್ಯರ್ಥಿಗಳು 120 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!