March 22, 2026

ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಸಂಸದರ 22ವರ್ಷದ ಮಗ ಸಾವು

0
IMG_20220310_103653.jpg

ಚೆನ್ನೈ: ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಂಸದರ ಪುತ್ರ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಡಿಎಂಕೆಯ ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಮೃತರು.

ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ.

ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!