March 22, 2026

ಉತ್ತರಾಖಂಡದಲ್ಲಿ ಜಿಜೆಪಿ –ಕಾಂಗ್ರೆಸ್‌ ಮಧ್ಯೆ ತೀವ್ರ ಪೈಪೋಟಿ

0
image_editor_output_image-1125219244-1646889005793.jpg

ಉತ್ತರಾಖಂಡ: ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳಿಗೆ ಮತ ಎಣಿಕೆ ಆರಂಭವಾಗಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ –ಕಾಂಗ್ರೆಸ್‌ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಸದ್ಯ 48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ 18 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

ಲಲ್ಕುವನ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಮುನ್ನಡೆ ಸಾಧಿಸಿದ್ದಾರೆ.

ಉತ್ತರಾಖಂಡದಲ್ಲಿ ಫೆಬ್ರುವರಿ 14ರಂದು ಮತದಾನ ನಡೆದಿತ್ತು. ಉತ್ತರಾಖಂಡದಲ್ಲಿ ಬಿಜೆಪಿ–ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಆದರೂ, ಬಿಜೆಪಿ ಗೆಲ್ಲುವ ಸಾಧ್ಯತೆಗಳು ಹೆಚ್ಚು ಎಂದು ಸಮೀಕ್ಷೆಗಳು ಹೇಳಿದ್ದವು.

ಚುನಾವಣೆಗೂ ಮುನ್ನ ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. 50 ಶಾಸಕರ ಬೆಂಬಲದೊಂದಿಗೆ ಬಿಜೆಪಿಯ ಪುಷ್ಕರ್‌ ಸಿಂಗ್‌ ದಾಮಿ ಅವರು ಮುಖ್ಯಮಂತ್ರಿಯಾಗಿದ್ದರು.

ಸದ್ಯ ಪುಷ್ಕರ್‌ ಸಿಂಗ್‌ ದಾಮಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಭುವನ್ ಕಪ್ರಿ ವಿರುದ್ಧ 900 ಮತಗಳ ಅಂತರದಿಂದ ಹಿನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!