March 22, 2026

ಉತ್ತರ ಪ್ರದೇಶದಲ್ಲಿ ಬಹುಮತದತ್ತ ಆಡಳಿತಾರೂಢ ಪಕ್ಷ ಬಿಜೆಪಿ, ಯೋಗಿ ಆದಿತ್ಯನಾಥ್ ಮತ್ತೆ ಸಿಎಂ?

0
Screenshot_2022-03-10-10-44-55-92_680d03679600f7af0b4c700c6b270fe7.jpg

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿಯು ಬಹುಮತ ಸಾಧಿಸುವತ್ತ ದಾಪುಗಾಲಿಟ್ಟಿದೆ.

ಬಹುಮತ ಸಾಬೀತು ಪಡಿಸಲು 202 ಸ್ಥಾನಗಳನ್ನು ಗೆಲ್ಲಬೇಕಾಗಿದ್ದು, ಬೆಳಿಗ್ಗೆ 10ರ ವೇಳೆಗೆ ಬಿಜೆಪಿ ನೇತೃತ್ವದ ಮೈತ್ರಿಕೂಟದ 300ಕ್ಕೂ ಅಧಿಕ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರವೇ ಮತ್ತೊಮ್ಮೆ ರಚನೆಯಾಗುವ ಸಾಧ್ಯತೆ ಇದೆ.

2017ರ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್‌ಪಿ 47, ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.

Leave a Reply

Your email address will not be published. Required fields are marked *

error: Content is protected !!