ಮಣಿಪುರದಲ್ಲೂ ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಮಣಿಪುರ: ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತಾರೂಢ ಬಿಜೆಪಿ ಇದೀಗ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಕಾಂಗ್ರೆಸ್ ನಾಲ್ಕು ಮತ್ತು ಜೆಡಿಯು 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಚುನಾವಣಾ ಆಯೋಗದ ಬೆಳಗ್ಗೆ 10 ಗಂಟೆಯ ಟ್ರೆಂಡ್ ಪ್ರಕಾರ, ಆರ್‌ಪಿಐ (ಅಠಾವಳೆ), ಎನ್‌ಪಿಎಫ್, ಎನ್‌ಪಿಪಿ, ಕೆಪಿಎ ಮತ್ತು ಸ್ವತಂತ್ರ ಅಭ್ಯರ್ಥಿಗಳು ತಲಾ ಒಂದೊಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಣಿಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗುರುವಾರ ಆರಂಭವಾಗಿದೆ. ಬಿಗಿ ಭದ್ರತೆ ಮತ್ತು ಕೋವಿಡ್-19ನ ಎಲ್ಲ ಕೋವಿಡ್ ಮಾರ್ಗಸೂಚಿಗನುಗುಣವಾಗಿ 16 ಜಿಲ್ಲೆಗಳ 41 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.




