ಕುಟುಂಬ ರಾಜಕಾರಣದ ಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ: ಬಿಜೆಪಿ
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆಯ ಆರಂಭಿಕ ಟ್ರೆಂಡ್ ಅನ್ನು ಗಮನಿಸುತ್ತಿದ್ದರೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇದು ಕುಟುಂಬ ರಾಜಕಾರಣವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿ ನೀಡಿದ್ದ ಕರೆಗೆ, ಮತದಾರರು ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿ ಹೇಳಿದೆ.
ಬಿಜೆಪಿ ರಾಜ್ಯಸಭಾ ಸದಸ್ಯ ವಿನಯ್ ಸಹಸ್ರಬುದ್ಧೆ ಟ್ವೀಟ್ ಮಾಡಿ, ಅಂತಿಮ ಫಲಿತಾಂಶ ಇನ್ನೂ ಘೋಷಣೆಯಾಗಬೇಕಿದೆ. ಆದರೆ, ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಮತದಾರರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕುಟುಂಬ ರಾಜಕಾರಣದ ಹಿನ್ನೆಲೆಯನ್ನು ಹೊಂದಿದ್ದ ಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಎಸ್‌ಪಿ ಹಾಗೂ ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಕಾಂಗ್ರೆಸ್, ಗೋವಾದಲ್ಲಿ ಟಿಎಂಸಿ ಸೋಲಿನ ಸುಳಿಯಲ್ಲಿವೆ. ಇದು ಶಿವಸೇನಾ ಮತ್ತು ಎನ್‌ಸಿಪಿಗೆ ದೊಡ್ಡ ಪಾಠವಾಗಲಿದೆ’ ಎಂದಿದ್ದಾರೆ.




