ಇವಿಎಂ ಸಮಸ್ಯೆಯಲ್ಲ, ಜನರ ತಲೆಯಲ್ಲಿರುವ ಚಿಪ್ಪಿನ ಸಮಸ್ಯೆ: ಅಸಾದುದ್ದೀನ್ ಓವೈಸಿ
ಲಕ್ನೋ: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಚುನಾವಣೆ ಕುರಿತು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀದ್ ಓವೈಸಿ ಪ್ರತಿಕ್ರಿಯಿಸಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳು ಇವಿಎಂ ಸಮಸ್ಯೆಗಳನ್ನು ಎತ್ತಿ ತೋರಿಸುವ ಮೂಲಕ ತಮ್ಮ ಸೋಲನ್ನು ಮರೆಮಾಚಲು ಪ್ರಯತ್ನಿಸುತ್ತಿವೆ. ಆದರೆ ಇದು ಇವಿಎಂ ಸಮಸ್ಯೆಯಲ್ಲ, ಜನರ ತಲೆಯಲ್ಲಿರುವ ಚಿಪ್ಪಿನ ಸಮಸ್ಯೆ. ಬಿಜೆಪಿ ಯಶಸ್ವಿಯಾಗಿರುವುದು 80-20. ನಾವು ನಾಳೆಯಿಂದಲೇ ಮತ್ತೆ ಕೆಲಸ ಮಾಡಲು ಪ್ರಾರಂಭಿಸುತ್ತೇವೆ. ಮುಂದಿನ ಬಾರಿ ಉತ್ತಮ ಸಾಧನೆ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದು ಓವೈಸಿ ತಿಳಿಸಿದ್ದಾರೆ.




