February 2, 2026

ಗೋಕುಲಪುರಿಯಲ್ಲಿ ಭಾರೀ ಬೆಂಕಿ: 7 ಮಂದಿ ಮೃತ್ಯು

0
image_editor_output_image769078121-1647062341637.jpg

ದೆಹಲಿ: ದೆಹಲಿಯ ಗೋಕುಲಪುರಿಯಲ್ಲಿ ಶುಕ್ರವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 7 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ತಿಳಿದ ತಕ್ಷಣ 13 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಈ ವೇಳೆ 7 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದು, ಸದ್ಯ ಬೆಂಕಿ ಹತೋಟಿಗೆ ಬಂದಿದೆ.

ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ನಾನೇ ಸ್ವತಃ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸಂತ್ರಸ್ತರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!