ಕಾಂಗ್ರೆಸ್ ಜೀವ ಕಳೆದುಕೊಂಡಿರುವ ಪಕ್ಷ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಕಾಂಗ್ರೆಸ್ ಪಕ್ಷವನ್ನು ಬದಿಗಿಟ್ಟು ಪ್ರಾದೇಶಿಕ ಪಕ್ಷಗಳೊಂದಿಗೆ ಬಿಜೆಪಿ ವಿರೋಧಿ ಮೈತ್ರಿ ಮಾಡಿಕೊಳ್ಳುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬದಿಗೊತ್ತಲಾಗುವುದು ಎಂದರು. ಆ ಪಕ್ಷ ಜೀವ ಕಳೆದುಕೊಂಡಿದ್ದೂ ಕಾಯುವುದರಲ್ಲಿ ಅರ್ಥವಿಲ್ಲ ಎಂದು ಪ್ರತಿಕ್ರಿಯಿಸಿದರು.
‘ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲ ಸ್ಥಳೀಯ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೆ ಕಾಂಗ್ರೆಸ್ ವ್ಯವಸ್ಥಿತವಾಗಿ ಗೆಲ್ಲುವ ಸ್ಥಿತಿಯಲ್ಲಿತ್ತು. ಆ ಪಕ್ಷ ಈಗ ಎಲ್ಲೆಡೆ ಸೋಲುತ್ತಿದೆ. ಪಕ್ಷದ ನಾಯಕರಿಗೆ ಗೆಲ್ಲುವ ಆಸಕ್ತಿಯೇ ಇಲ್ಲದಂತಾಗಿದೆ ಎಂದಿದ್ದಾರೆ.




