May 18, 2026

ಮಾಣಿ ಗ್ರಾಮ ಪಂಚಾಯತ್ ನ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆ

0
IMG-20220312-WA0076.jpg

ಬಂಟ್ವಾಳ: ಮಾಣಿ ಗ್ರಾಮ ಪಂಚಾಯತ್ ನ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯು ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಸಭೆಯಲ್ಲಿ ನೀರಿನ ಶುಲ್ಕವನ್ನು ನೂರು ಶೇಕಡಾ ವಸೂಲಾತಿ ಮಾಡುವ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಣಯಿಸಲಾಯಿತು. ಮತ್ತು ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು.

Leave a Reply

Your email address will not be published. Required fields are marked *

error: Content is protected !!