ಬೆಳ್ತಂಗಡಿ: ಸ್ನಾನಕ್ಕೆಂದು ನದಿಗೆ ತೆರಳಿದ್ದ ವ್ಯಕ್ತಿ ಸಾವು
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಸ್ಥಳೀಯ ವ್ಯಕ್ತಿಯೋರ್ವರು ಮೃತ್ಯುಂಜಯ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ.
ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ಮೃತ ದುರ್ದೈವಿ.
ಇದನ್ನೂ ಓದಿ:ಸುಬ್ರಹ್ಮಣ್ಯ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ
ಅಡಕೆ ಕೊಯ್ಲು ಪರಿಣಿತರಾಗಿದ್ದ ಇವರಿಗೆ ತಂದೆ, ತಾಯಿ, ಪತ್ನಿ, ಪುತ್ರಿ ಇದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.




