February 1, 2026

ಹಿರಿಯೂರು: ನಿಂತಿದ್ದ ಲಾರಿಗೆ ಟೆಂಪೊ ಟ್ರಾವಲರ್ ಢಿಕ್ಕಿ, ಇಬ್ಬರು ಮೃತ್ಯು, 10 ಜನರು‌ ಆಸ್ಪತ್ರೆಗೆ ದಾಖಲು

0
image_editor_output_image-1671487132-1647234443923.jpg

ಹಿರಿಯೂರು: ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.

ಮೃತರಲ್ಲಿ ಒಬ್ಬರನ್ನು ಶ್ವೇತಾ (24) ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಹತ್ತು ಜನರು ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೆಂಪೊ ಗೋಕರ್ಣದಿಂದ ಬೆಂಗಳೂರು ಕಡೆ ಸಾಗುವಾಗ ಈ ಅವಘಡ ಸಂಭವಿಸಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!