August 21, 2026

‘ಕಾಶ್ಮೀರ ಫೈಲ್ಸ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ರಾಜ್ಯ ಸರ್ಕಾರ

0
image_editor_output_image-526368617-1647236524209.jpg

ಬೆಂಗಳೂರು: ಕಾಶ್ಮೀರ ಪಂಡಿತರ ಕುರಿತಾದ ನೈಜ ಘಟನೆಗಳಾಧಾರಿತ ಬಾಲಿವುಡ್ ಚಿತ್ರ ‘ಕಾಶ್ಮೀರ ಫೈಲ್ಸ್’ ಚಿತ್ರಕ್ಕೆ ಕರ್ನಾಟಕ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಮಾರ್ಚ್ 11 ರಂದು ಬಿಡುಗಡೆಯಾಗಿದ್ದು, ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಕಥೆ ಪ್ರೇಕ್ಷಕರ ಮನ ಮುಟ್ಟುತ್ತಿದೆ. ಬಹುತೇಕ ವೀಕ್ಷಕರು ಚಿತ್ರ ನೋಡಿ ಭಾವುಕರಾಗುತ್ತಿದ್ದಾರೆ. ಈಗಾಗಲೇ ‘ದಿ ಕಾಶ್ಮೀರ್ ಫೈಲ್ಸ್’ ಅನ್ನು ಹರಿಯಾಣ, ಗುಜರಾತ್ ಮತ್ತು ಮಧ್ಯಪ್ರದೇಶ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳಲ್ಲಿ ತೆರಿಗೆ ಮುಕ್ತಗೊಳಿಸಿದೆ.

ಈ ಸಾಲಿಗೆ ಕರ್ನಾಟಕವೂ ಸೇರ್ಪಡೆಯಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ತೆರಿಗೆ ಮುಕ್ತ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಈ ಚಿತ್ರವನ್ನು ಪ್ರೋತ್ಸಾಹಿಸುವ ಸಂಬಂಧ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!