February 1, 2026

ಸಿ.ಎಂ. ಇಬ್ರಾಹಿಂ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ: ಸಿದ್ದರಾಮಯ್ಯ

0
Screenshot_2022-03-14-11-31-37-92_680d03679600f7af0b4c700c6b270fe7.jpg

ಬೆಂಗಳೂರು: ಸಿ.ಎಂ. ಇಬ್ರಾಹಿಂಗೆ ಆಸೆ ಇರಬೇಕಿತ್ತು. ಆದರೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರ ವಿರುದ್ದ ಮಾಜಿ ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಬ್ರಾಹಿಂ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಭದ್ರಾವತಿಯಲ್ಲಿ ಹಾಲಿ ಶಾಸಕ ಸಂಗಮೇಶ್‌ಗೆ ಟಿಕೆಟ್ ತಪ್ಪಿಸಿ ಇಬ್ರಾಹಿಂಗೆ ಕೊಡಲಾಗಿತ್ತು. ಆದರೆ ಅಲ್ಲಿ ಸೋತ ಬಳಿಕ ಆತನನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಲಾಯಿತು ಯೋಜನಾ ಆಯೋಗದ ಉಪಾಧ್ಯಕ್ಷನ್ನಾಗಿ ಮಾಡಲಾಗಿತ್ತು. ಆದರೂ ಸಹ ಪಕ್ಷ ಬಿಟ್ಟು ಹೋಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಶಾಸಕ ಜಿ.ಟಿ. ದೇವೇಗೌಡ ಅವರು ತನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ಖಾತ್ರಿ ಮಾಡುವುದಾದರೆ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದು, ಈ ಬಗ್ಗೆ ನನ್ನ ಜೊತೆಯೂ ಅವರು ಮಾತನಾಡಿದ್ದಾರೆ. ಆದರೆ ಈ ಬಗ್ಗೆ ಹೈಕಮಾಂಡ್ ಜೊತೆ ಇನ್ನೂ ಮಾತನಾಡಿಲ್ಲ ಎಂದಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಸಿದ್ದರಾಮಯ್ಯ ಸಹಿತ ಎಲ್ಲ ಕಾಂಗ್ರೆಸ್ ನಾಯಕರ ಮೇಲೆ ಮುನಿಸಿಕೊಂಡು ಪಕ್ಷ ತೊರೆಯುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!