ಹಿಜಾಬ್ ತೀರ್ಪು ಪ್ರಕಟ: ಮಾ.15 ರಂದು ದ.ಕ.ಜಿಲ್ಲೆ ಶಾಲಾ – ಕಾಲೇಜುಗಳಿಗೆ ರಜೆ
ಮಂಗಳೂರು: ಹೈಕೋರ್ಟ್ ಹಿಜಾಬ್ ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ನಾಳೆ ಮಾ.15 ರಂದು ದ.ಕ.ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಲ್ಲದೆ ಜಿಲ್ಲೆಯಾದ್ಯಂತ ನಾಳೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ಮುಂದುವರಿಯುತ್ತದೆ. ಆದರೆ ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.




