February 1, 2026

ಮೂಡುಬಿದಿರೆ: ಖಾಸಗಿ ಇಂಜಿನಿಯರಿಂಗ್ ಕಾಲೇಜಿನ  ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ:
ಇಬ್ಬರು ಆಸ್ಪತ್ರೆಗೆ ದಾಖಲು

0
IMG_20211029_102929.jpg

ಮೂಡುಬಿದಿರೆ: ಇಲ್ಲಿನ ತೋಡಾರು ಸಮೀಪ ಇರುವ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಸಹಾಝ್ ಮತ್ತು ಮಹಮ್ಮದ್ ಸ್ವರೂಬ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂದಿನ ಶನಿವಾರ ‘ಸಂಪ್ರದಾಯ’ ದಿನ ಕಾರ್ಯಕ್ರಮ ನಡೆಯಲಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಬುಧವಾರ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ತೃತೀಯ ವರ್ಷದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ ಗುಂಪು ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬುಧವಾರ ನಡೆದ ಹೊಡೆದಾಟದ ಸಂಬಂಧ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು.

ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ 40 ಮಂದಿಯ ತಂಡ ಹಲ್ಲೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!