February 2, 2026

ಮಂಗಳೂರು ನಗರದ್ಯಾಂತ್ಯ ಬಿಗಿ ಪೊಲೀಸ್ ಬಂದೋಬಸ್ತ್: ಪೊಲೀಸರ ಪಥ ಸಂಚಲನ

0
image_editor_output_image-1718128830-1647320331602.jpg

ಮಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಲಿರುವ ಹಿನ್ನಲೆಯಲ್ಲಿ ನಗರದ್ಯಾಂತ್ಯ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಗರದ ಸರ್ಕ್ಯೂಟ್ ಹೌಸ್ ಬಳಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಂದೋಬಸ್ತ್ ಸೂಚನೆ ನೀಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕಮಿಷನರ್ ಎನ್. ಶಶಿಕುಮಾರ್, ಇಂದು ಹೈಕೋರ್ಟ್‌‌ನಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು, ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.

ಇನ್ನು ಶಾಲಾ ಕಾಲೇಜು ಆವರಣದ 200ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವಂತಿಲ್ಲ ಎಂದು ತಿಳಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಹೈ ಅಲರ್ಟ್ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಕಮಿಷನರ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು.

ಇನ್ನು ಇಂದು ಬೆಳ್ಳಗ್ಗಿನಿಂದಲೇ 1200ಕ್ಕೂ ಅಧಿಕ ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿ ನಿರತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!