August 21, 2026

ಸ್ನೇಹಿತರು, ಪೋಷಕರಿಗೆ ವಿಡಿಯೋ ಸಂದೇಶ ಕಳುಹಿಸಿ ಅಪಾರ್ಟ್ಮೆಂಟ್ ನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

0
Screenshot_2022-03-15-11-48-04-83_680d03679600f7af0b4c700c6b270fe7.jpg

ಬೆಂಗಳೂರು: ಸ್ನೇಹಿತರು ಮತ್ತು ಪೋಷಕರಿಗೆ ವಿಡಿಯೋ ಸಂದೇಶ ಕಳುಹಿಸಿ ಅಪಾರ್ಟ್ಮೆಂಟ್ ನ 23ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಣನಕುಂಟೆಯಲ್ಲಿ ನಡೆದಿದೆ. 

ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ (ಹೆಸರು ಬದಲಾಯಿಸಲಾಗಿದೆ) ಕೋಣನಕುಂಟೆ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಆತ್ಮಹತ್ಯೆಗೆ ಮುನ್ನ ಅಭಿಷೇಕ್, ಸೆಲ್ಫಿ ವಿಡಿಯೊ ಚಿತ್ರೀಕರಿಸಿದ್ದ. ಅದೇ ವಿಡಿಯೊವನ್ನು ಆಡಿಯೊ ಸಂದೇಶದ ಸಮೇತ ತಂದೆ ಹಾಗೂ ಇತರರಿಗೆ ಕಳುಹಿಸಿದ್ದ. ‘ಕ್ಷಮಿಸಿ ಅಪ್ಪ. ನಾನು ನಿಮ್ಮನ್ನು ಬಿಟ್ಟು ಹೋಗುತ್ತಿದ್ದೇನೆ’ ಎಂಬುದಾಗಿ ಹೇಳಿದ್ದ’ ಎಂದು ಪೊಲೀಸರು ವಿವರಿಸಿದರು. ‘ತಂದೆ, ಸಂಬಂಧಿಕರು ಸ್ಥಳಕ್ಕೆ ಬರುವಷ್ಟರಲ್ಲೇ ಅಭಿಷೇಕ್ ಆತ್ಮಹತ್ಯೆಗೆ ಶರಣಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆ
ಮಾಡಲಾಗುತ್ತಿದೆ’ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!