February 2, 2026

ಹಿಜಾಬ್‌ಗೆ ಅನುಮತಿ ಕೋರಿ ಸುಪ್ರೀಂಕೋರ್ಟ್ ಮೊರೆ: ಮುಸ್ಲಿಂ ಮುಖಂಡರ ನಿರ್ಧಾರ

0
Screenshot_2022-03-15-11-55-34-38_680d03679600f7af0b4c700c6b270fe7.jpg

ಬೆಂಗಳೂರು: ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಇದನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಲು ವಿವಿಧ ಮುಸ್ಲಿಮ್ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ನಿರ್ಧರಿಸಿವೆ.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ, ಹೈಕೋರ್ಟ್ ತೀರ್ಪು ಸಮರ್ಪಕವಾಗಿಲ್ಲ. ಹಿಜಾಬ್ ಧರಿಸುವುದು ಇಸ್ಲಾಮ್ ನ ಪ್ರಮುಖ ಭಾಗವಾಗಿದೆ. ಹೈಕೋರ್ಟ್ ಇದನ್ನು ಪರಿಗಣಿಸಿಲ್ಲ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!