March 22, 2026

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಶಾಲಾ-ಕಾಲೇಜುಗಳಲ್ಲಿ ತರಗತಿಗಳು ಮುಂದುವರಿಕೆ: ದ.ಕ ಜಿಲ್ಲಾಧಿಕಾರಿ

0
IMG_20220315_220645.jpg

ಮಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರದಂದಿ ತೀರ್ಪು ಪ್ರಕಟವಾಗಲಿದ್ದ ಕಾರಣದಿಂದಾಗಿ ದ.ಕ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ, ಬುಧವಾರದಿಂದ ಎಂದಿನಂತೆ ತರಗತಿ ಮುಂದುವರೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.

ಕೋರ್ಟ್ ಆದೇಶವನ್ನು ಪಾಲಿಸಿಕೊಂಡು ವಿದ್ಯಾರ್ಥಿಗಳು ಶಾಂತಿಯುತವಾಗಿ ತರಗತಿಗಳಿಗೆ ಹಾಜರಾಗಬೇಕೆಂದು ಕೋರ್ಟ್ ಹೇಳಿದ್ದು, ಜಿಲ್ಲಾಧಿಕಾರಿಗಳು ಕೂಡ ಈ ವಿಚಾರವನ್ನು ಉಲ್ಲೇಖಿಸಿದ್ದಾರೆ. ಓದಿನ ಕಡೆಗೆ ವಿದ್ಯಾರ್ಥಿಗಳು ಗಮನ ಹರಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!