March 22, 2026

ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

0
image_editor_output_image1972464697-1647408408570.jpg

ಚಂಡೀಗಡ: ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಬುಧವಾರ ರಾಜೀನಾಮೆ ನೀಡಿದ್ದಾರೆ.

‘ಕಾಂಗ್ರೆಸ್ ಅಧ್ಯಕ್ಷರು ಬಯಸಿದಂತೆ ನಾನು ರಾಜೀನಾಮೆ ನೀಡಿದ್ದೇನೆ’ ಎಂದು ಸಿಧು ಟ್ವೀಟ್ ಮಾಡಿದ್ದಾರೆ. ಜತೆಗೆ ರಾಜೀನಾಮೆ ಪತ್ರದ ಪ್ರತಿಯನ್ನೂ ಪೋಸ್ಟ್ ಮಾಡಿದ್ದಾರೆ.

ರಾಜೀನಾಮೆ ನೀಡುವಂತೆ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ಹಾಗೂ ಪಂಜಾಬ್‌ ಘಟಕಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದರು. ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಸೋನಿಯಾ ಈ ನಿರ್ಧಾರ ಕೈಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!