ವಿಟ್ಲ: ಶಾಲಾ ಬಸ್ ಮತ್ತು ಕಾರು ನಡುವೆ ಅಪಘಾತ
ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಇಂದು ನಡೆದಿದೆ. ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಂತೆಯೇ ಬಸ್ಸಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.




