February 4, 2026

ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ: ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ ಅಮೀರ್-ಇ-ಶರಿಯತ್

0
Screenshot_2022-03-16-13-47-11-21_680d03679600f7af0b4c700c6b270fe7.jpg

ಬೆಂಗಳೂರು: ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಇದನ್ನು ಪ್ರಶ್ನಿಸುವಂತಿಲ್ಲ ಎಂದು ಹಿಜಾಬ್ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿ ನೀಡಿದ್ದ ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ ಮಾರ್ಚ್ 17ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಕೋರ್ಟ್ ತೀರ್ಪು ನಿರಾಶಾದಾಯಕವಾಗಿದ್ದು, ನಾಳೆ ಶಾಂತಿಯುತವಾಗಿ ಬಂದ್ ನಡೆಸಬೇಕು ಎಂದು ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ ಕರೆ ನೀಡಿದ್ದು, ಈ ಸಂದರ್ಭ ಬಲವಂತದ ಬಂದ್ ಅಥವಾ ಜಾಥಾ , ಮೆರವಣಿಗೆ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ

Leave a Reply

Your email address will not be published. Required fields are marked *

error: Content is protected !!