August 21, 2026

ಹಿಜಾಬ್ ಕಡ್ಡಾಯವಲ್ಲ ತೀರ್ಪು:
ಮಾ 17 ರಂದು ಕರ್ನಾಟಕ ಬಂದ್’ಗೆ ಸುಳ್ಯ ತಾಲೂಕು ಮುಸ್ಲಿಮ್ ಒಕ್ಕೂಟ ಬೆಂಬಲ: ಇಕ್ಬಾಲ್ ಎಲಿಮಲೆ

0
IMG-20220316-WA0015.jpg

ಸುಳ್ಯ: ಇತ್ತೀಚೆಗಿನ ಕರ್ನಾಟಕ ಉಚ್ಛ ನ್ಯಾಯಾಲಯದ ಹಿಜಾಬ್ ಕುರಿತ ತೀರ್ಪುವಿನಲ್ಲಿ ಇಸ್ಲಾಮಿನಲ್ಲಿ ಮುಸ್ಲಿಮ್ ಮಹಿಳೆಯರಿಗೆ ಹಿಜಾಬ್ ಮಹತ್ವವಲ್ಲ ಮತ್ತು ಹಿಜಾಬ್ ಇಸ್ಲಾಮಿನಲ್ಲಿ ಅವಿಭಾಜ್ಯ ಅಂಗವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ವಿಮರ್ಶಿಸಿ ಕರ್ನಾಟಕದಾದ್ಯಂತ ಮಾರ್ಚ್ 17 ರಂದು ಸ್ವಯಂ ಪ್ರೇರಿತ ವ್ಯವಹಾರ ಸ್ಥಗಿತಕ್ಕೆ ವಿವಿಧ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದು, ಈ ಕರೆಗೆ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟ ಬೆಂಬಲ ಸೂಚಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ಇಕ್ಬಾಲ್ ಎಲಿಮಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀರ್ಪು ಸಾಂವಿಧಾನಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣ ಹಕ್ಕುಗಳನ್ನು ಕಸಿದು ಕೊಳ್ಳುವ ಸ್ಥಿತಿಯನ್ನು ನಿರ್ಮಾಣ ಮಾಡಿದೆ.
ಈ ನಿಟ್ಟಿನಲ್ಲಿ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಶಾಂತಿಯುತ ವ್ಯವಹಾರ ಸ್ಥಗಿತ ಮಾಡಬೇಕಾಗಿ ವಿನಂತಿ ಮತ್ತು ಈ ಸ್ಥಗಿತ ಶಾಂತಿಯುತ ವಾಗಿರುತ್ತದೆ. ಕಾನೂನು ಶಾಂತಿ ಸುವ್ಯವಸ್ಥೆ ಪಾಲನೆಗೆ ಪೂರಕವಾಗಿರಲಿ ಎಂದು ಕರೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!