ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ:
ವಿದ್ಯಾರ್ಥಿಯ ಬಂಧನ

ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಮಣಿಪಾಲ್ ತಾಂತ್ರಿತ ಸಂಸ್ಥೆಯ ಮಾಜಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ (24) ಎಂದು ಗುರುತಿಸಲಾಗಿದೆ. ಅಕ್ಟೋಬರ್ 16 ರಂದು ಇಬ್ಬರು ಪಾರ್ಟಿ ಮಾಡಿದ್ದು, ಇಂದ್ರಾಳಿಯ ಫ್ಲಾಟ್ ವೊಂದರಲ್ಲಿ ಆರೋಪಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಈ ವಿಚಾರವನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ತಿಳಿಸಿರುವ ಸಂತ್ರಸ್ತೆ, ಕೇಸ್ ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಕೋಮಾ ಸ್ಥಿತಿಯಲ್ಲಿದ್ದು, ತೀವ್ರ ರಕ್ತಸ್ರಾವವಾಗಿರುವುದಾಗಿ ತಿಳಿದುಬಂದಿದೆ. ಪ್ರಸ್ತುತ ಆಕೆಗೆ ಮಣಿಪಾಲ್ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.